ಬಲ್ಯೊಟ್ಟು ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ ವಲಯ ಮತ್ತು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಕಿದಿಯೂರು ಆಶ್ರಯದಲ್ಲಿ ಇತ್ತೀಚೆಗೆ ಉಡುಪಿ ಅಜ್ಜರಗಾಡು ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಹೊಸ್ಮಾರು ಬಲ್ಯೊಟ್ಟು ಗುರುಕೃಪಾ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಪೂರ್ವಜ್ ಶರ್ಮಾ 80 ಮೀ. ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ನ. 15ರಂದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಈತ ಒರಿಮಾರು ಸಂತೋಷ್ ಪುರೋಹಿತ್ ಮತ್ತು ಪ್ರತಿಮಾ ಎಸ್. ದಂಪತಿಯ ಪುತ್ರ. ಸಾಧಕ ವಿದ್ಯಾರ್ಥಿಗೆ ಶಾಲಾ ಸಂಚಾಲಕರಾದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top