ವಕ್ಫ್‌ ನೋಟಿಸ್‌ ಹಿಂಪಡೆಯಲು ಅಧಿಕೃತ ಆದೇಶ

ಬೆಂಗಳೂರು : ರೈತರಿಗೆ ನೀಡಲಾಗಿರುವ ವಕ್ಫ್‌ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.
ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.
ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಿಈ ಕುರಿತು ನೀಡಲಾದ ನೋಟಿಸ್‌ಗಳನ್ನ ಹಿಂಪಡೆಯಬೇಕು. ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯಪುರ ಜಿಲ್ಲೆಯಿಂದ ವಕ್ಫ್‌ ನೋಟಿಸ್‌ ಆತಂಕ ಪ್ರಾರಂಭವಾಗಿತ್ತು. ರೈತರ ಪಹಣಿಯಲ್ಲಿ ದಿಢೀರ್‌ ಎಂದು ವಕ್ಫ್‌ ಬೋರ್ಡ್‌ ಹೆಸರು ಕಾಣಿಸಿಕೊಂಡು ಕೋಲಾಹಲ ಉಂಟಾಗಿತ್ತು. ಇಡೀ ದೇಶದಲ್ಲಿ ವಕ್ಫ್‌ ಅವಾಂತರ ಸುದ್ದಿಯಾಗಿ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸಿದ ಬಳಿಕ ಈಗ ನೋಟಿಸ್‌ಗಳನ್ನು ಹಿಂಪಡೆಯಲು ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಿಸಿದ್ದರು. ನೋಟಿಸ್‌ನಲ್ಲಿ ಅವರು ಉಳುಮೆ ಮಾಡುತ್ತಿದ್ದ ಜಮೀನು ವಕ್ಫ್‌ ಸೊತ್ತು ಎಂದು ಹೇಳಲಾಗಿತ್ತು. ಇದು ರೈತರ ಆತಂಕಕ್ಕೆ ಕಾರಣವಾಗಿತ್ತು.









































































































error: Content is protected !!
Scroll to Top