ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನೀರೆ ಗ್ರಾಮದಲ್ಲಿ ಸಂಭವಿಸಿದೆ.
ಅಶೋಕ (45) ನೇಣಿಗೆ ಶರಣಾದವರು. ಇವರು ಕಾಲಿನ ನರದ ಸಮಸ್ಯೆಯಿಂದ ಬಳಲುತ್ತಿದ್ದರು ಹಾಗೂ ಮದ್ಯ ಸೇವನೆಯ ಚಟ ಹೊಂದಿದ್ದರು. ಇದೇ ಕಾರಣವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನ. 8ರ ರಾತ್ರಿ 10 ಗಂಟೆಯಿಂದ ನ. 9ರ ಬೆಳ್ಳಗಿನ ಜಾವ 3 ಗಂಟೆಯ ನಡುವೆ ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನೀರೆ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ


































