ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್‌ ಕೆರೆಹಳ್ಳಿ ಬಂಧನ

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಹೀಯಾಳಿಸಿದ್ದ ಜಮೀರ್‌ ಅಹ್ಮದ್‌ ಮೇಲೆ ಪುನೀತ್‌ ಕೆರೆಹಳ್ಳಿ ಹರಿಹಾಯ್ದಿದ್ದರು. ಫೇಸ್‌ಬುಕ್‌ ಲೈವ್‌ನಲ್ಲಿ ಜಮೀರ್‌ ವಿರುದ್ಧ ಪುನೀತ್‌ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ ಎಂದು ಸಚಿವ ಜಮೀರ್‌ಗೆ ಜೀವ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಸಚಿವರ ಆಪ್ತ ಸಹಾಯ ಬಿ.ಎಸ್‌.ಅಶೋಕ್‌ ನೀಡಿದ ದೂರಿನ ಮೇರೆಗೆ ಕೆರೆಹಳ್ಳಿಯನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದರು.









































































































error: Content is protected !!
Scroll to Top