ಮಾಳ ಗುರುಕುಲ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಾರ್ಕಳ : ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನವನ್ನು ಗುರುವಾರ ಆಚರಿಸಲಾಯಿತು. ಶಾಲಾ ನಾಯಕ ವಿಖ್ಯಾತ್ ಡೋಂಗ್ರೆ ಮುಖ್ಯ ಅತಿಥಿಗಳಾಗಿ ಪ್ರತಿಭಾನ್ವಿತ ಪೂರ್ವ ವಿದ್ಯಾರ್ಥಿನಿ ವಚನಾ, ಶಾಲಾ ಉಪಮುಖ್ಯಮಂತ್ರಿ ವಿದ್ಯಾ ಡೋಂಗ್ರೆ ಉಪಸ್ಥಿತರಿದ್ದರು. ಶಿಕ್ಷಕರು ಪ್ರಾರ್ಥನೆ ಹಾಡಿದರು. ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಮಕ್ಕಳ ದಿನಾಚರಣೆಯ ಕುರಿತು ಮಕ್ಕಳು ಮತ್ತು ಶಿಕ್ಷಕಿಯರು ಮಾತನಾಡಿದರು. ಮಕ್ಕಳು, ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಶಿಕ್ಷಕಿ ಸುನೀತಾ ಕಾರ್ಯಕ್ರಮ ನಿರ್ವಹಿಸಿದರು, ಜ್ಯೋತಿ ಸ್ವಾಗತಿಸಿ, ವಸಂತಿ ವಂದನಾರ್ಪಣೆಗೈದರು.











































































error: Content is protected !!
Scroll to Top