ಸಾಂಸ್ಕೃತಿಕ ಸ್ಪರ್ಧೆ – ಮಣಿಪಾಲ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗ ಮಟ್ಟಕ್ಕೆ

ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನ. 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅಲಿಷ್ಕಾ ಕ್ಲಿಯಾಂತ ಬಿ. ಇಂಗ್ಲಿಷ್‌ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಅನುಷ್ಕಾ ಆರ್.‌ ಖಾರ್ವಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತನ್ಮಯಿ ಭಟ್‌ ಜಾನಪದ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top