ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಾರ್ಕಳ : ನೂತನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ನ.22ರಂದು ಗುದ್ದಲಿ ಪೂಜೆಯನ್ನು ಶಾಸಕ ವಿ. ಸುನಿಲ್‌ ಕುಮಾರ್‌ ನೆರವೇರಿಸಿದರು.
15 ಲಕ್ಷ ರೂ. ಅನುದಾನ
ರಥಬೀದಿಯ ನೂತನ ರಸ್ತೆಯ ಕಾಂಕ್ರೀಟಿಕರಣಕ್ಕಾಗಿ ದೇವಸ್ಥಾನದ ಆಡಳಿತ ಮಂಡಳಿ ಕ್ಷೇತ್ರದ ಶಾಸಕರಿಗೆ ಮನವಿ ಮಾಡಿದ್ದು, ಅಂತೆಯೇ ಶಾಸಕರ ಪ್ರದೇಶಾಭಿವೃದ್ಧಿಯ ನಿಧಿಯಿಂದ 15 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ.

ಈ ಸಂದರ್ಭ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗಣಪತಿ ಹೆಗ್ಡೆ, ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸನ್ಮತಿ ನಾಯಕ್‌, ಕಾರ್ಯದರ್ಶಿ ಕಿಶೋರ್‌ ಶೆಟ್ಟಿ, ನಿಕಟಪೂರ್ವ ಮೊಕ್ತೇಸರ ಸತ್ಯೇಂದ್ರ ನಾಯಕ್‌ ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.































































































































error: Content is protected !!
Scroll to Top