ಕಾರ್ಕಳ : ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾದ ಘಟನೆ ನ. 23ರಂದು ಮುಂಜಾನೆ 5 ಗಂಟೆ ಸುಮಾರಿಗೆ ಶಿರ್ಲಾಲು ನಿಡ್ಡೆಪಾದೆಯಲ್ಲಿ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಡಿಕ್ಕಿಯ ಪರಿಣಾಮವಾಗಿ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ 2 ಮಹಿಳೆಯರು ಹಾಗೂ 2 ಪುರುಷರು ಪ್ರಯಾಣಿಸುತ್ತಿದ್ದರು. ಇವರ ಪೈಕಿ ಇಬ್ಬರು ಗಾಯಗೊಂಡಿದ್ದು, ಓರ್ವರಿಗೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.
ಶಿರ್ಲಾಲಿನಲ್ಲಿ ಕಾರು ಅಪಘಾತ






























































