ಹೆಬ್ರಿ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನ. 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಕಾರ್ತಿಕ್ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಹಾಗೂ ಸುಕನ್ಯಾ ಶ್ರೀ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು ಅಭಿನಂದಿಸಿದ್ದಾರೆ .
ಸಾಂಸ್ಕೃತಿಕ ಸ್ಪರ್ಧೆ – ಅಮೃತ ಭಾರತಿಯ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ






























































