ಬೆಂಗಳೂರು : ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರವನ್ನು ಕಾಂಗ್ರೆಸ್ ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ ಗೆಲುವು






























































