ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಈ ಪ್ರದರ್ಶನದ ಮೂಲಕ ಭಾರತದ ಆರಂಭಿಕ ಜೋಡಿ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ಜೋಡಿ ಅಪರೂಪದ ದಾಖಲೆಯೊಂದನ್ನು ಮುರಿದು ಹಾಕಿದೆ.
ಪರ್ತ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ವೇಳೆ ಭಾರತ ತಂಡ ಭರ್ಜರಿ ಆರಂಭ ಪಡೆದಿದ್ದು, 2ನೇ ದಿನದಾಟದ ಅಂತ್ಯಕ್ಕೆ 57 ಓವರ್ನಲ್ಲಿ ವಿಕೆಟ್ ನಷ್ಟವಿಲ್ಲದೇ 172 ರನ್ ಕಲೆಹಾಕಿದೆ. ಆ ಮೂಲಕ ಭಾರತ ತಂಡ 218 ರನ್ಗಳ ಮುನ್ನಡೆ ಸಾಧಿಸಿದೆ.
ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 193 ಎಸೆತಗಳಲ್ಲಿ 2 ಸಿಕ್ಸರ್ 7 ಬೌಂಡರಿ ಸಹಿತ ಅಜೇಯ 90 ರನ್ ಕಲೆಹಾಕಿದ್ದು, ಅವರಿಗೆ ಉತ್ತಮ ಸಾಥ್ ನೀಡಿದ ಕೆಎಲ್ ರಾಹುಲ್ ಕೂಡ 153 ಎಸೆತಗಳಲ್ಲಿ 4 ಬೌಂಡರಿ ಸಹಿತ 62 ಕಲೆಹಾಕಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.































































