ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಕಾರ್ಕಳ : ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್‌ ಆಯ್ಕೆಯಾಗಿದ್ದಾರೆ. ದಾವಣಗೆರೆಯಲ್ಲಿ ನ.22ರಂದು ಜರುಗಿದ ಸಹಕಾರ ಭಾರತಿ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆರಿಸಲಾಯಿತು.
ಕೆಎಂಎಫ್ ಮಂಗಳೂರಿನ ನಿರ್ದೇಶಕರಾಗಿರುವ ಸಾಣೂರು ನರಸಿಂಹ ಕಾಮತ್ ಕಳೆದ ಎರಡು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಸಹಕಾರ ಭಾರತಿಯ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.
ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ.ಎನ್ ಪಾಟೀಲ್ ಈ ಆಯ್ಕೆಯನ್ನು ಘೋಷಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನ್ ದಾಸ್ ನಾಯಕ ಸಹಕಾರಿ ಧ್ವಜವನ್ನು ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿ ವರ್ಗಾವಣೆ ಮಾಡಿದರು.
ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಕಾರ್ಯವಾಹ ಅರವಿಂದ ದೇಶಪಾಂಡೆ, ನಿರ್ಗಮನ ಅಧ್ಯಕ್ಷ ರಾಜಶೇಖರ ಶೀಲವಂತ, ನೂತನ ಅಧ್ಯಕ್ಷ ದಾವಣಗೆರೆಯ ಪ್ರಭುದೇವ ಆರ್.ಎಂ, ರಾಯಚೂರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಪಾಟೀಲ್ ಉಪಸ್ಥಿತರಿದ್ದರು.























































error: Content is protected !!
Scroll to Top