ಸೌಮ್ಯ, ಅನ್ವಿತಾಗೆ ಚಿನ್ನ, ವಾಣಿಗೆ ಬೆಳ್ಳಿ, ಧನ್ಯಶ್ರೀಗೆ ಕಂಚು
ಕಾರ್ಕಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ ಮಿನಿ ಒಲಿಂಪಿಕ್ ಕ್ರೀಡಾಕೂಟ ವೇಯ್ಟ್ ಲಿಫ್ಟಿಂಗ್‌ನಲ್ಲಿ ಕಾರ್ಕಳ ಎಸ್‌ವಿಟಿ ಶಾಲೆಯ ವಿದ್ಯಾರ್ಥಿನಿಯರಾದ 9ನೇ ತರಗತಿಯ ಸೌಮ್ಯ ಮತ್ತು 10ನೇ ತರಗತಿಯ ಅನ್ವಿತಾ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದಿರುತ್ತಾರೆ. 9ನೇ ತರಗತಿಯ ವಾಣಿ ಸಂಗಪ್ಪ ಮಸ್ತಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಹಾಗೂ 8ನೇ ತರಗತಿಯ ಧನ್ಯಶ್ರೀ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ ಮತ್ತು ಪ್ರಿಯಾ ಪ್ರಭು ತರಬೇತಿ ನೀಡಿರುತ್ತಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯ ನೇಮಿರಾಜ್ ಶೆಟ್ಟಿ, ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್, ಕಾಲೇಜಿನ ಸಿಬ್ಬಂದಿ ವರ್ಗ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.






























































