ಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ

ಉಡುಪಿ: ಕನ್ನಡ ಚಿತ್ರರಂಗದ ಒಂದು ಕಾಲದ ಕನಸಿನ ರಾಣಿ ಖ್ಯಾತಿಯ ನಟಿ ಮಾಲಾಶ್ರೀ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಸ್ವಾಮೀಜಿಯವರು ಫಲ ಮಂತ್ರಾಕ್ಷತೆಯನ್ನಿತ್ತು ಮಾಲಾಶ್ರೀ ಮತ್ತು ಅವರ ಮಗಳನ್ನು ಆಶೀರ್ವದಿಸಿದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.











































































error: Content is protected !!
Scroll to Top