ಬಜಗೋಳಿ ಸರಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ : ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಬೆಂಗಳೂರು ರಾಜ್ಯ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಇವುಗಳ ಜಂಟಿ ಸಾರಥ್ಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಬಜಗೋಳಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್‌ ಪದವಿಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಅನ್ಸಿಫಾ ಬಾನು ಪ್ರಥಮ, ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಸುದೀಕ್ಷಾ ಶೆಟ್ಟಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಆಚಾರ್ಯ ಮತ್ತು ಶ್ರೀಯಾ ಪ್ರಥಮ ಹಾಗೂ ಭಿತ್ತಿಪತ್ರ ರಚನೆ ಸ್ಪರ್ಧೆಯಲ್ಲಿ ಸೃಜನ್ ಭಂಡಾರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.













































































error: Content is protected !!
Scroll to Top