ಸುಸ್ಥಿರ ಸಮಾಜ ನಿರ್ಮಾಣಕ್ಕೆ ಅಗತ್ಯ ಯುವಜನತೆ ಕೊಡುಗೆ : ಡಾ.ಶಮ ಶುಕರ್

ಕಾರ್ಕಳ: ದೇಶದ ಸಂಪತ್ತಾಗಿರುವ ಯುವಜನತೆ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಸುಸ್ಥಿರ ಸಮಾಜ ನಿರ್ಮಾಣಕ್ಕೆ ಯುವಜನತೆ ಕೊಡುಗೆ ಅಗತ್ಯವಿದೆ. ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಕ್ಕೆ ದಾಸರಾಗದೆ ಕಲಿಕೆಯತ್ತ ಪೂರ್ಣ ಗಮನ ಹರಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಿರ್ಗಾನ ಡಾ.ಶಮ ಶುಕರ್ ಕಿವಿಮಾತು ಹೇಳಿದರು.

ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇದರ ಐಕ್ಯೂಎಸಿ, ರಾಷ್ಟ್ರೀಯ ಸೇವಾ ಯೋಜನೆ ಮತ್ತು
ಮಾದಕದ್ರವ್ಯ ವ್ಯಸನ ತಡೆ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಕಾರ್ಕಳ, ನಗರ ಪೋಲಿಸ್ ಠಾಣೆ ಕಾರ್ಕಳ ಆಶ್ರಯದಲ್ಲಿ ನಡೆದ ಮಾದಕದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾನಾಡಿದರು.
ಅಧ್ಯಕ್ಞತೆ ವಹಿಸಿದ ಕಾಲೇಜಿ ಪ್ರಾಚಾರ್ಯರಾದ ಡಾ. ಸುರೇಶ್ ರೈ ಕೆ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲಿ ಸಂಯಮ ಹಾಗೂ ಶಿಸ್ತಿನ ಜೀವನ ನಡೆಸಿದಾಗ ದೇಶದ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಗ ಕಾರ್ಕಳ ನಗರ ಪೊಲೀಸ್‌ ಠಾಣೆ ಕ್ರೈಮ್ ವಿಭಾಗದ ಅಧಿಕಾರಿ ಶಿವಕುಮಾರ್ ಎಸ್.ಆರ್ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮದ ಕುರಿತು ತಿಳಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಪ್ರಾಸ್ತಾವಿಕವಾಗಿ ಮಾತಾನಾಡಿ, ಮಾದಕದ್ರವ್ಯ ವಿರೋಧಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಯಾಕೆ ಅಗತ್ಯ ಎಂದು ವಿವರಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಾಣಿಜ್ಯಶಾಸ್ತ್ರ ವಿಭಾಗದ ಮುಖಸ್ಥೆ ಡಾ. ಚಂದ್ರಾವತಿ, ಐಕ್ಯೂಎಸಿ ಸಹಸಂಚಾಲಕಿ ಸಂಧ್ಯಾ ಭಂಡಾರಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಶೆಟ್ಟಿ ಎಂ.ಎ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅರುಣಾ ಕುಮಾರಿ, ನಿರ್ವಹಣಾಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಸುಬ್ರಹ್ಮಣ್ಯ ಕೆ.ಸಿ ಉಪಸ್ಥಿತರಿದ್ಧರು.
ವಾಣಿಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ಸುದರ್ಶನ್ ಪಿ. ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿ ದ್ವಿತೀಯ ಬಿಎ ತರಗತಿಯ ವಿಲಾಸಿನಿ
ಕಾರ್ಯಕ್ರಮ ನಿರೂಪಿಸಿ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕ ಸೃಜನ್ ವಂದಿಸಿದರು.











































































error: Content is protected !!
Scroll to Top