ಬಸ್‌ ಪಲ್ಟಿ: 12ಕ್ಕೇರಿದ ಸಾವಿನ ಸಂಖ್ಯೆ

ಮುಂಬಯಿ: ಮಹಾರಾಷ್ಟ್ರ ಸಾರಿಗೆ ಬಸ್ಸೊಂದು ಪಲ್ಟಿಯಾಗಿ 12 ಜನ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ ಭಂಡಾರ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದ ಈ ವೇಳೆ ಗೊಂಡಿಯಾ–ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 12 ಜನ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 10 ಲಕ್ಷ ರೂ. ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅವರು, ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.































































































error: Content is protected !!
Scroll to Top