ಕಾರ್ಕಳ : ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಸಹಿತ ಆರೋಪಿ ಪರಾರಿಯಾದ ಘಟನೆ ನ. 30ರಂದು ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಕುಕ್ಕುಂದೂರು ಗ್ರಾಮದ ಗೋವಿಂದ ಎಂಬವರು ಸಂಜೆ 7.14ಕ್ಕೆ ಕುಕ್ಕುಂದೂರಿನಲ್ಲಿರುವ ಶಾಸಕರ ಕಚೇರಿ ಬಳಿ ರಸ್ತೆಯ ಬದಿಯಲ್ಲಿ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ವಾಹನವು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗೋವಿಂದ ಅವರು ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಆರೋಪಿಯು ಗಾಯಾಳುವಿಗೆ ಚಿಕಿತ್ಸೆ ಕೊಡಿಸದೆ ವಾಹನವನ್ನೂ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪಾದಚಾರಿಗೆ ಡಿಕ್ಕಿ – ಆರೋಪಿ ಪರಾರಿ






























































