ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ನ. 29ರಂದು ನಿಟ್ಟೆಯಲ್ಲಿ ಸಂವಿಸಿದೆ.
ನಿಟ್ಟೆ ಲೆಮಿನಾ ಕ್ರಾಸ್ ಬಳಿ ಹಾದು ಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಜಯಂತ ಎಂಬವರು ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಎಲೆಕ್ಟ್ರಿಕ್ ಅಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದ್ದು, ದೂಪದಕಟ್ಟೆ ಕಡೆಯಿಂದ ನಿಟ್ಟೆ ಪರಪ್ಪಾಡಿ ಕಡೆಗೆ ಕೀರ್ತನ್ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಕೀರ್ತನ್ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೀರ್ತನ್ ನೀಡಿದ ದೂರಿನಂತೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರರಕಣ ದಾಖಲಾಗಿರುತ್ತದೆ.





























































































































error: Content is protected !!
Scroll to Top