ಬಿ.ವೈ. ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ‌ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ಕೊಟ್ಟಿದ್ದಾರೆ. ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ. ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.





























































































































error: Content is protected !!
Scroll to Top