ತೆಲಂಗಾಣ ಪೊಲೀಸರಿಂದ ಏಳು ನಕ್ಸಲರ ಎನ್​ಕೌಂಟರ್​

ತೆಲಂಗಾಣ : ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು ಎಸ್ಪಿ ಡಾ. ಶಬರೀಶ್, ಏತೂರುನಗರಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದ್ದಾರೆ.

ತೆಲಂಗಾಣ ಪೊಲೀಸ್ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಎತೂರುನಗರಂನ ಅರಣ್ಯ ಪ್ರದೇಶದಲ್ಲಿ ಕೂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಘಟನಾ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ 47 ರೈಫಲ್‌ಗಳು ಸೇರಿದ್ದು, ಹತರಾದವರಲ್ಲಿ ಒಬ್ಬನನ್ನು ನಿಷೇಧಿತ ಸಿಪಿಐ (ಮಾವೋವಾದಿ) ತೆಲಂಗಾಣ ರಾಜ್ಯ ಸಮಿತಿಯ ಕಾರ್ಯದರ್ಶಿ ಕುರ್ಸಮ್ ಮಂಗು ಅಲಿಯಾಸ್ ಭದ್ರು ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.





























































































error: Content is protected !!
Scroll to Top