ಪ್ರತಿಭಾ ಕಾರಂಜಿ : ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ವಲಯ ಮತ್ತು ಶ್ರೀಮದ್ ಭುವನೇಂದ್ರ ಶಾಲೆ ಕಾರ್ಕಳ ಇವರ ಸಹಯೋಗದೊಂದಿಗೆ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಅಶ್ನಿ ಕೋಟ್ಯಾನ್ ಭರತ ನಾಟ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
10ನೇ ತರಗತಿಯ ವಿದ್ಯಾರ್ಥಿನಿಯರಾದ ಹಸ್ನಾ ಜುಮಾನ್‌ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ತೃತೀಯ, ಅನಘ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು 8ನೇ ತರಗತಿಯ ಆರಾಧ್ಯ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.





















































error: Content is protected !!
Scroll to Top