ಹೆಬ್ರಿ: ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಡಿ.28ರಂದು ಜರುಗಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ಬುಧವಾರ ಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಶ್ರೀ ಗುರುರಕ್ಷಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ ಪೂಜಾರಿ, ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ, ವಾರ್ಷಿಕೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಗಣಪತಿ ಎಂ., ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭಧರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗುರುಪ್ರಸಾದ್ ಹೆಗ್ಡೆ ಕೊಳಂಬೆ, ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸನತ್ ಕುಮಾರ್, ಶಾಂತಾ ದಿನೇಶ್ ಪೂಜಾರಿ, ಸಂತೋಷ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶಶಿಕಲಾ ಡಿ. ಪೂಜಾರಿ, ನಿವೃತ್ತ ಶಿಕ್ಷಕ ಗಣಪತಿ ಪೈ, ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಸಂತೋಷ ಕುಮಾರ್ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ ನಿರೂಪಿಸಿದರು. ಸಂತೋಷಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಸನ್ನ ಕುಮಾರ್ ಶೆಟ್ಟಿ ವಂದಿಸಿದರು.
ಮುದ್ರಾಡಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ











































