ಕಾರ್ಕಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ

ಕಾರ್ಕಳ : ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಮತ್ತು ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿ. 17ರಂದು ತಾಲೂಕು ಪಂಚಾಯತ್ ಕಟ್ಟಡದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಅಜಿತ್‌ ಹೆಗ್ಡೆ ಮಾಳ ಅಧಿಕಾರ ಸ್ವೀಕರಿಸಿದರು.

ಕಚೇರಿ ಉದ್ಘಾಟನೆ ಬಳಿಕ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್‌ ಮುಖಂಡ, ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾದ್ಯಕ್ಷ ಉದಯ ಕುಮಾರ್‌ ಶೆಟ್ಟಿ ಮುನಿಯಾಲು, ಸರಕಾರದೊಂದಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಿದಲ್ಲಿ ರಾಜ್ಯ ಸರಕಾರದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಸಾಧ್ಯ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಪ್ರಾರಂಭಗೊಂಡ ಸಮಿತಿಯ ನೂತನ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಹಾಗೂ ಪದಾಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಸರಕಾರದ ಯೋಜನೆಯನ್ನು ತಲುಪಿಸೋಣ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ತಹಶೀಲ್ದಾರ್‌ ಪ್ರದೀಪ್‌ ಆರ್.‌ , ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ, ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ಉಪಸ್ಥಿತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಯಿತು.





























































































error: Content is protected !!
Scroll to Top