ರಾಜ್ಯಮಟ್ಟದ ಅಬಾಕಸ್‌ ಸ್ಪರ್ಧೆ : ಗುರುಕುಲ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ : ಮೂಡುಬಿದಿರೆಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್‌ ಮತ್ತು ವೇದಗಣಿತ ಸ್ಪರ್ಧೆಯಲ್ಲಿ ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಅಪೇಕ್ಷ ಕಾಮತ್, ಮನ್ವಿತ್ ಜೋಶಿ ಮತ್ತು ಸಮೃದ್ಧಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು 1100 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗಜಾನನ ಮರಾಠೆ ಮತ್ತು ಸದಸ್ಯರು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ ಮರಾಠೆ ಮತ್ತು ಸದಸ್ಯರು ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

































































































error: Content is protected !!
Scroll to Top