ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಮಾಲೀಕರ ಮೇಲೆ ಮುಂದಿನ ಆದೇಶ ನೀಡುವ ತನಕ ಕ್ರಮ ಕೈಗೊಳ್ಳಬಾರದು ಎಂಬ ಆದೇಶ ನೀಡುವ ಮೂಲಕ ವಾಹನ ಮಾಲೀಕರಿಗೆ ಹೈಕೋರ್ಟ್‌ ದೊಡ್ಡ ರಿಲೀಫ್‌ ನೀಡಿದೆ. ಸಾರಿಗೆ ಇಲಾಖೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರವರೆಗೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ ಇದಕ್ಕೆ ಸದ್ಯ ಹೈಕೋರ್ಟ್ ತಡೆ ನೀಡಿದೆ.

ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕೋರ್ಟ್ ಡಿಸೆಂಬರ್ 31ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್​ಆರ್​ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ. ಹೆಚ್ಚಿನ ವಾಹನ ಮಾಲೀಕರು ಹೆಚ್ಎಸ್​ಆರ್​ಪಿ ಆಳವಡಿಕೆಗೆ ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ತೀರ್ಮಾನ ಮಾಡಿದೆ.

































































































error: Content is protected !!
Scroll to Top