ಕಾರ್ಕಳ : ಅಖಿಲ ಹವ್ಯಕ ಮಹಾಸಭೆ 81 ಸಂವತ್ಸರ ಪೂರೈಸಿದ ಹಿನ್ನೆಲೆಯಲ್ಲಿ ಕೊಡಮಾಡುವ ಹವ್ಯಕ ಸ್ಫೂರ್ತಿ ರತ್ನ ಪ್ರಶಸ್ತಿಗೆ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ನೀಲಕಂಠ ಎಂ. ಹೆಗಡೆ ಆಯ್ಕೆಯಾಗಿದ್ದಾರೆ.
ನೀಲಕಂಠ ಎಂ. ಹೆಗಡೆ ಕಳೆದ 25 ವರ್ಷಗಳಿಂದ ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯ ಸದಸ್ಯರಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಲಯನ್ಸ್ ಜಿಲ್ಲೆಯ ಗವರ್ನರ್ ಆಗಿ ಗಮನಾರ್ಹ ಸಮಾಜ ಸೇವೆ ಸಲ್ಲಿಸಿರುತ್ತಾರೆ. ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಆಗಿ ಸಲ್ಲಿಸಿದ ಸೇವೆ ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ವಿಶೇಷ ಪ್ರಶಂಸೆ ಗಳಿಸಿತ್ತು. ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ. 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಹವ್ಯಕ ವಿಶ್ವ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನಿಸಲಾಗುವುದು.
ಎನ್. ಎಂ. ಹೆಗಡೆಯವರಿಗೆ ಹವ್ಯಕ ಸ್ಫೂರ್ತಿ ರತ್ನ ಪ್ರಶಸ್ತಿ

















