ನಿಟ್ಟೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ

ಕಾರ್ಕಳ : ನಿಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶೆಟ್ಟಿಗಾರ್ ಹಾಗೂ ಕಾರ್ಯದರ್ಶಿಯಾಗಿ ರೂಪೇಶ್ ಕುಮಾರ್ ಆಯ್ಕೆಯಾಗಿದ್ದಾರೆ. ನಿಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಸಮಿತಿಯ 33ನೇ ವರ್ಷದ ಪೂಜಾ ಮಹೋತ್ಸವದ ಕುರಿತಾದ ಸಭೆಯಲ್ಲಿ ಲಕ್ಷ್ಮೀನಾರಾಯಣ ಶರ್ಮಾ ಅವರ ಮಾರ್ಗದರ್ಶನದಲ್ಲಿ 24ನೇ ಸಾಲಿನ ಅಧ್ಯಕ್ಷ ಪ್ರಶಾಂತ್ ಕುಮಾರ್ ಜೈನ್, ಕಾರ್ಯದರ್ಶಿ ಪೂರ್ಣಿಮಾ ರಾಜ್ ಮತ್ತು ಸರ್ವ ಸದಸ್ಯರ ಉಪಸ್ಥಿತಿಯಲ್ಲಿ 2025ನೇ ವರ್ಷದ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
2025ರ ಮಾ. 1ರಂದು ಸಂಜೆ 5-30ಕ್ಕೆ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಪ್ರಾರಂಭಗೊಂಡು ನಂತರ ಧಾರ್ಮಿಕ ಸಭೆ ಹಾಗೂ ತುಳುನಾಟಕ ಒಳಗೊಂಡಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

































































































error: Content is protected !!
Scroll to Top