ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನ

ಕಾರ್ಕಳ : ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಡಿ. 26 ರಂದು ನಿಧನ ಹೊಂದಿದರು. ‌ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ‌

1991ರ ಪಿ. ವಿ. ನರಸಿಂಹರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅವರು ಆರಂಭಿಸಿದ ಆರ್ಥಿಕ ಸುಧಾರಣೆಗಳು, 2004-2014ರ ದೀರ್ಘ ಅವಧಿಯಲ್ಲಿ ಪ್ರಧಾನಿಯಾಗಿ ಅವರು ದೇಶಕ್ಕೆ ನೀಡಿದ ದೂರದೃಷ್ಟಿ ಭಾರತದ ರಾಜಕೀಯದಲ್ಲಿ ಮಹತ್ವವಾದುದು..

ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿ ಎನಿಸಿಕೊಂಡಿದ್ದಾರೆ.

ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು. ಅವರ ಕೃತಿ ಭಾರತದ ರಫ್ತು ಸ್ಥಿತಿ ಮತ್ತು ಸ್ವಾವಲಂಬಿ ಸುಸ್ಥಿರ ಪ್ರಗತಿಯಲ್ಲಿ ಅದರ ಭವಿಷ್ಯ “India’s Export Trends and Prospects for Self-Sustained Growth” [Clarendon Press, Oxford, 1964] ಭಾರತದ ಆಂತರಿಕ ಆಧಾರಿತ ವ್ಯಾಪಾರ ನೀತಿಯ ಆರಂಭಿಕ ವಿಮರ್ಶೆಯಾಗಿತ್ತು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ.































































































error: Content is protected !!
Scroll to Top