ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಜ. 3-4ರಂದು ಕಾಲೇಜು ವಾರ್ಷಿಕೋತ್ಸವ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ತಾರ ಕಾರ್ಯಕ್ರಮ ನಡೆಯಲಿದೆ.
ಜ. 3ರಂದು ಮಧ್ಯಾಹ್ನ 2.30ರಿಂದ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ಣಾಟಕ ಬ್ಯಾಂಕ್ ಮಾನವ ಸಂಪನ್ಮೂಲ ಇಲಾಖೆ ಉಪ ಪ್ರಧಾನ ವ್ಯವಸ್ಥಾಪಕ ಗೋಪಾಲಕೃಷ್ಣ ಸಾಮಗ ಬಿ. ನೇರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಎನ್.ಸಿ.ಎಸ್. &ಕೋ. ಸ್ಥಾಪಕ ಸಿಎ ನಿತೇಶ್ ಶೆಟ್ಟಿ, ವಾಶ್ತುಶಿಲ್ಪಿ ಎ.ಆರ್. ಸುನಿಲ್ ಕುಮಾರ್, ಹಿರ್ಗಾನ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಉಪಸ್ಥಿತರಿರಲಿದ್ದಾರೆ. ಸಂಜೆ 6.15ರಿಂದ ʼಕ್ರಿಯೇಟಿವ್ ಯಕ್ಷಾರಾಧನಮ್ʼ ಹವ್ಯಾಸಿ ಕಲಾವಿದರಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಜ. 4ರಂದು ಬೆಳಿಗ್ಗೆ 10 ಗಂಟೆಗೆ ಖ್ಯಾತ ಸಾಹಿತಿ ಬಿ. ಆರ್. ಲಕ್ಷ್ಮಣ ರಾವ್ ಅವರಿಂದ ಕವಿತೆ ಹುಟ್ಟುವ ಸಮಯ ವಿಷಯ ಕುರಿತು ಸಂವಾದ ನಡೆಯಲಿದೆ. 11 ಗಂಟೆಗೆ ಐವರು ಲೇಖಕಿಯರ ಪುಸ್ತಕ ಅನಾವರಣ ʼವನಿತಾ ಸುಗ್ಗಿʼ ಹಾಗೂ ಅಂಕಣಕಾರ ಡಾ. ನಾ. ಸೋಮೇಶ್ವರ ಅವರಿಂದ ಪುಸ್ತಕ ಪ್ರೀತಿಯಿಂದ ಬದುಕು ಸಂಪ್ರೀತಿ ವಿಷಯದ ಕುರಿತು ಸಂವಾದ ನಡೆಯಲಿದೆ.

ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮಧ್ಯಾಹ್ನ 2.30ರಿಂದ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಅಂಕಣಕಾರ ಡಾ. ನಾ. ಸೋಮೇಶ್ವರ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಪನಿರ್ದೇಶಕ ಮಾರುತಿ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಭಾಗಿಯಾಗಲಿದ್ದಾರೆ.
ಸಂಜೆ 6.15ರಿಂದ ಕ್ರಿಯೇಟಿವ್ ವಿದ್ಯಾರ್ಥಿಗಳಿಂದ ʼವಿವಿಧತೆಯಲ್ಲಿ ಏಕತೆʼ ಪರಿಕಲ್ಪನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.






























































