ಡಿಜಿಪಿಗೆ ಸಿಟಿ ರವಿ ದೂರು : ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ

ಬೆಂಗಳೂರು : ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್​ಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ದೂರು ನೀಡಿದ್ದಾರೆ. ಡಿ. 31ರಂದು ನಗರದ ಡಿಜಿಪಿ ಕಚೇರಿಯಲ್ಲಿ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್ ಮತ್ತು ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ್ ವಿರುದ್ಧ ಆರೋಪ ಮಾಡಿದ್ದಾರೆ.

ತಮ್ಮನ್ನು ಎತ್ತಿ ಪಶುವಿನ ರೀತಿ ಕಿಡ್ನ್ಯಾಪ್ ಮಾಡಿದ್ದಾರೆಂದು ಬೆಳಗಾವಿ ಪೊಲೀಸ್​ ಕಮಿಷನರ್​, ಎಸ್​ಪಿ ವಿರುದ್ಧ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ಇಡೀ ಸನ್ನಿವೇಶ ಫೇಕ್ ಎನ್​​ಕೌಂಟರ್ ರೀತಿ ಇತ್ತು. ಲೈಸೆನ್ಸ್ಡ್ ಸುಪಾರಿ ಕಿಲ್ಲರ್​​ಗಳ‌ ರೀತಿ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.





























































































































error: Content is protected !!
Scroll to Top