ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ತಾಲೂಕು ಹಾಗೂ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು–ಕೊಕ್ಕರ್ಣೆ ಇವರ ಸಹಭಾಗಿತ್ವದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಎಸ್. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 10ನೇ ತರಗತಿಯ ವಿದ್ಯಾರ್ಥಿನಿ ಅಶ್ನಿಕೋಟ್ಯಾನ್ ಭರತನಾಟ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಪ್ರತಿಭಾ ಕಾರಂಜಿ : ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ

































