ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಯಿಂದ 30 ಲ.ರೂ. ದರೋಡೆ

ವಿಟ್ಲ: ಜಾರಿ ನಿರ್ದೇಶನಾಲಯದ ಅಧಿಕಾರಿಗಳಂತೆ ಸೋಗು ಹಾಕಿ ವಿಟ್ಲದ ಬೀಡಿ ಉದ್ಯಮಿಯೊಬ್ಬರ ಮನೆಯಿಂದ 30 ಲ.ರೂ. ದರೋಡೆ ಮಾಡಿದ ಘಟನೆ ಸಂಭವಿಸಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ.
ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ತಮ್ಮನ್ನು ಇ.ಡಿ. ಅಧಿಕಾರಿಗಳೆಂದು ಪರಿಚಯಿಸಿಕೊಂಡಿದೆ. ಬಳಿಕ ಮನೆಯಲ್ಲಿ ಸುಮಾರು ಎರಡು ತಾಸು ಶೋಧ ನಡೆಸುವ ನಾಟಕವಾಡಿದೆ. ಅಕ್ರಮ ಹಣ ವರ್ಗಾವಣೆ ಸಹಿತ ಹಲವು ಅವ್ಯವಹಾರಗಳು ನಡೆದಿದೆ ಎಂದು ಮನೆಯವರನ್ನು ಬೆದರಿಸಿ ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

































































































error: Content is protected !!
Scroll to Top