ವಿದ್ಯಾ ಡೊಂಗ್ರೆ ಮತ್ತು ಶರಣ್ಯ ಜೋಶಿ ಭರತನಾಟ್ಯ ಜೂನಿಯರ್ ವಿಭಾಗದಲ್ಲಿ ತೇರ್ಗಡೆ

ಕಾರ್ಕಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿನ ವಿದ್ಯಾರ್ಥಿನಿಯರಾದ ವಿದ್ಯಾ ಡೊಂಗ್ರೆ ಮತ್ತು ಶರಣ್ಯ ಜೋಶಿ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ವತಿಯಿಂದ ನಡೆಸಿದ 2023-24ನೇ ಸಾಲಿನ ಭರತನಾಟ್ಯ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ನೃತ್ಯ ಗುರು ವಿದ್ವಾನ್ ಸುಬ್ರಹ್ಮಣ್ಯ ನಾವಡ ಅವರಿಂದ ನೃತ್ಯ ತರಬೇತಿ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಅಭಿನಂದಿಸಿದ್ದಾರೆ.



































































































error: Content is protected !!
Scroll to Top