ಜ. 11 : ಉಡುಪಿಯಲ್ಲಿ ಸಂವಿಧಾನ ಸನ್ಮಾನ, ಪುಸ್ತಕ ಲೋಕಾರ್ಪಣೆ : ಅಣ್ಣಾಮಲೈ ಉಪಸ್ಥಿತಿ

ಕಾರ್ಕಳ : ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ಜ.11ರಂದು ಜರಗಲಿರುವ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಪೂರ್ವಭಾವಿ ಸಭೆ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ವಿಕಾಸ ಸೇವಾ ಕಚೇರಿಯಲ್ಲಿ ಜರುಗಿತು. ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೇರವೇರಿದ್ದು, ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್‌ ನಾಯಕ್‌ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಮಾಹಿತಿ ನೀಡಿ, ಸಂವಿಧಾನದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವವರ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರತ್ನಾಕರ ಹೆಗ್ಡೆ ಮಾತನಾಡಿ, ಅಂಬೇಡ್ಕರ್‌ ಮತ್ತು ಸಂವಿಧಾನದ ವಿಚಾರದಲ್ಲಿ ಇತಿಹಾಸ ತಿಳಿಯದೆ ಬಿಜೆಪಿಯನ್ನು ಬೇರೆ ಮಾಡುವವರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಅಧ್ಯಕ್ಷ ನವೀನ್‌ ನಾಯಕ್‌ ಮಾತನಾಡಿ, ಪಕ್ಷ ಸಂಘಟನೆಗೆ, ಸಂವಿಧಾನಕ್ಕೆ ಗೌರವ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜ.11ರಂದು ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸುವಂತೆ ವಿನಂತಿಸಿಕೊಂಡರು. ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಕುಚ್ಚೂರು ಶ್ರೀಮಾಲ್ದಿ ದೇವಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಕುಲ್‌ದಾಸ್‌ ಡಾ. ಪ್ರಪ್ಪುಲ್ಲ ಮಲ್ಯಾಡಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ, ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ ಸಾಲಿಯಾನ್‌, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಶಿವಪುರ ಉಪಸ್ಥಿತರಿದ್ದರು. ರವೀಂದ್ರ ಕುಮಾರ್‌ ಸ್ವಾಗತಿಸಿ, ನಿರೂಪಿಸಿದರು. ಸತೀಶ್‌ ಪೂಜಾರಿ ಬೋಳ ವಂದಿಸಿದರು.

































































































error: Content is protected !!
Scroll to Top