ಬೆಳ್ಮಣ್ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್‌ ಸದಸ್ಯರಿಂದ ಅನುದಾನ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಬೆಳ್ಮಣ್‌ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ‌ ನಿಧಿ ಯೋಜನೆಯಡಿ ಅನುದಾನ ಕೋರಿ ಮನವಿ ಸಲ್ಲಿಸಿದ್ದರು.
ಶಾಸಕರ ಮನವಿಗೆ ಪೂರಕವಾಗಿ ವಿಧಾನ ಪರಿಷತ್‌ ಸದಸ್ಯರಾದ ಕೇಶವ್‌ ಪ್ರಸಾದ್‌ ಎಸ್‌. ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಹಾಗೂ ಹೇಮಲತಾ ನಾಯಕ್‌ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 05. ಲಕ್ಷ ಅನುದಾನವನ್ನು ಒದಗಿಸಲಾಗಿರುತ್ತದೆ. ಈಗಾಗಲೇ ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ 20 ಲಕ್ಷ ಅನುದಾನ ಒದಗಿಸಲಾಗಿರುತ್ತದೆ.

ಬೆಳ್ಮಣ್‌ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣದಿಂದಾಗಿ ಬೆಳ್ಮಣ್‌ ಹಾಗೂ ಆಸುಪಾಸಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಕಾರ್ಕಳ ಶಾಸಕರ ಕಚೇರಿ ವಿಕಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









































error: Content is protected !!
Scroll to Top