ಉಡುಪಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ಭಟ್

ಉಡುಪಿ : ಉಡುಪಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಂತೂರು ಕೊಪ್ಲದ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಜ. 8ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ. ದಿನಕರ ಶೆಟ್ಟಿ ಅಂಪಾರು ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದಲ್ಲಿ ಖಾಲಿಯಿದ್ದ ವಿವಿಧ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಉಡುಪಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಸತ್ಯಸಾಯಿ ಪ್ರಸಾದ್ ಅವರ ನಿವೃತ್ತಿಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಂತೂರು ಕೊಪ್ಲದ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಉಪಾಧ್ಯಕ್ಷರನ್ನಾಗಿ ಕೊಡಂಗಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸವಿತಾ ಅವರನ್ನು ಹಾಗೆಯೇ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಪದ್ಮಾ ಶೆಟ್ಟಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸರಕಾರಿ ಸಂಯುಕ್ತ ಪ್ರೌಢಶಾಲೆ ಒಳಕಾಡು ಉಡುಪಿ ಇಲ್ಲಿನ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ವಿನಯ ಅವರನ್ನು ಆಯ್ಕೆ ಮಾಡಲಾಯಿತು.

ಕೋಶಾಧಿಕಾರಿಯಾಗಿ ಬೆಳಪು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ಅನಸೂಯ ಅವರೇ ಮುಂದುವರಿಯಲಿದ್ದಾರೆ. ಎರ್ಮಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಲ್ಲಿಕಾ ಸಹಕಾರ್ಯದರ್ಶಿಯಾಗಿ, ಪಡು ಅಲೆಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಶೋಧ ಅವರನ್ನು ಸಂಘಟನಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದ ಜವಾಬ್ದಾರಿಯನ್ನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜೀವ ದೇವಾಡಿಗ ನಿರ್ವಹಿಸಿದ್ದರು.









































error: Content is protected !!
Scroll to Top