ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ತಾಲೂಕು ಕಚೇರಿಯಲ್ಲಿ ಚಾಲನೆ

ಕಾರ್ಕಳ : ತಾಲೂಕು ಕಚೇರಿ ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಭೂ ಸುರಕ್ಷಾ ಯೋಜನೆಗೆ ಜ. 15ರಂದು ತಾಲೂಕು ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಶಾಸಕ ವಿ. ಸುನಿಲ್‌ ಕುಮಾರ್‌ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ಸಂದರ್ಭ ಡಿಜಿಟಲೀಕರಣಕ್ಕೆ ಸಂಬಂಧಪಟ್ಟ ಮಾಹಿತಿಯುಳ್ಳ ಕರಪತ್ರ ಬಿಡುಗಡೆಗೊಳಿಸಿದ ಅವರು ಕಂಪ್ಯೂಟರ್‌ನಲ್ಲಿ ದಾಖಲೆಗಳನ್ನು ಸ್ಕ್ಯಾನ್‌ ಮಾಡುವ ಮೂಲಕ ಸಾಂಕೇತಿಕವಾಗಿ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಿದರು.

ಈ ಸಂದರ್ಭ ಸಹಾಯಕ ಆಯುಕ್ತರಾದ ಮಹೇಶ್ಚಂದ್ರ ಕೆ., ತಹಶೀಲ್ದಾರ್‌ ಪ್ರದೀಪ್‌ ಆರ್‌., ಉಪತಹಶೀಲ್ದಾರಾದ ಹರಿಪ್ರಸಾದ್‌, ಮಂಜುನಾಥ್‌, ನಮಿತಾ, ಆಹಾರ ಶಿರಸ್ತೆದಾರ ಶೆಹನಾಜ್‌, ಕಾರ್ಕಳ-ಅಜೆಕಾರು ಕಂದಾಯ ನಿರೀಕ್ಷಕರು, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಅಕ್ರಮ ಸಕ್ರಮ ಸಮಿತಿ ಸದಸ್ಯ ನವೀನ್‌ ದೇವಾಡಿಗ, ಭೂ ನ್ಯಾಯ ಮಂಡಳಿ ಸದಸ್ಯ ಸುನೀಲ್‌ ಭಂಡಾರಿ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕು ಕಚೇರಿ ಸಿಬ್ಬಂದಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ದಾಖಲೆಗಳ ಡಿಜಿಟಲೀಕರಣ
ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತನೆ
ರೆಕಾರ್ಡ್‌ ರೂಂಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ
ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯ
ನೇರವಾಗಿ ಡಿಜಿಟಲ್‌ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ



































































































error: Content is protected !!
Scroll to Top