ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ

ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.
ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ನ್ಯಾ. ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ವಾದಮಾಡಿ ತನಿಖೆ ನಿಷ್ಪಕ್ಷಪಾತವಾಗಿರಬೇಕು, ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗಿರುವಾಗ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಾರೆ. ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ. ಹೀಗಾಗಿ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. 56 ಕೋಟಿ ಮೊತ್ತದ ಸೈಟ್​​ಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಸಿಎಂ ಪತ್ನಿ ಈಗ 14 ಸೈಟ್​​ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್​ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್​​ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.



































































































error: Content is protected !!
Scroll to Top