ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟ ಸರಿಗಮ ವಿಜಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾರಾಗಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.
ಕೆಲವು ನಟ-ನಟಿಯರು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ನಿಇಜವಾಗಲ್ಲ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ನಾಳೆ ಚಾಮರಾಜಪೇಟೆಯ ಟಿಆರ್‌ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಯ್‌ಗೆ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ, ವಿಲನ್ ಪಾತ್ರಗಳಲ್ಲಿ ನಟಿಸಿದ್ದಾರೆ.
ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. ಅದಾದ ಬಳಿಕ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಹಲವು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

ನಟ ದಿವಂಗತ ಟೈಗರ್ ಪ್ರಭಾಕರ್ ಆಪ್ತರಾಗಿದ್ದ ಸರಿಗಮ ವಿಜಿ 1975ರಲ್ಲಿ ತೆರೆಕಂಡ ಗೀತಪ್ರಿಯ ನಿರ್ದೇಶನದ ‘ಬೆಳುವಲದ ಮಡಿಲಲ್ಲಿ’ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2400ಕ್ಕೂ ಹೆಚ್ಚು ಸೀರಿಯಲ್ ಹಾಗೂ 80ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿವೆ.



































































































error: Content is protected !!
Scroll to Top