ಕಾರ್ಕಳ : ಮುಡಾರು ಗ್ರಾಮ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಶಾಸಕ ವಿ. ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜ.15ರಂದು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ಸರಕಾರದ ವಿವಿಧ ಸವಲತ್ತು ಮತ್ತು ಮುಡಾರು ಗ್ರಾಮ ಪಂಚಾಯತ್ನ ಸ್ವಂತ ಅನುದಾನದಲ್ಲಿ ಸಹಾಯಧನ, ಶಾಲೆಗಳಿಗೆ ಕ್ರೀಡೋಪಕರಣ ವಿತರಣಾ ಕಾರ್ಯಕ್ರಮ ನೆರವೇರಿತು.
ಗ್ರಾಮ ಪಂಚಾಯತ್ನ ಸ್ವಂತ ಅನುದಾನದ ಶೇ.25 ನಿಧಿಯಲ್ಲಿ ವೈದ್ಯಕೀಯ ಸಹಾಯಧನ, ಶೈಕ್ಷಣಿಕ ಸಹಾಯಧನ, ಸ್ಕೂಲ್ ಮಕ್ಕಳಿಗೆ ಅತ್ಯುನ್ನತ ಗುಣಮಟ್ಟದ ಸ್ಕೂಲ್ ಬ್ಯಾಗ್ ವಿತರಣೆ
ಗ್ರಾಮ ಪಂಚಾಯತ್ನ ಸ್ವಂತ ಅನುದಾನದ ಶೇ. 5 ನಿಧಿಯಲ್ಲಿ ವೈದ್ಯಕೀಯ ಸಹಾಯಧನ ನೀಡಲಾಯಿತು.
ಗ್ರಾಮ ಪಂಚಾಯತ್ನ ಸ್ವಂತ ಅನುದಾನದ ಶೇ. 2 ನಿಧಿಯಲ್ಲಿ ಗ್ರಾಮದ ವ್ಯಾಪ್ತಿಯ ಎಲ್ಲಾ ಶಾಲೆಯ ಮತ್ತು ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ ಮಾಡಲಾಯಿತು.
ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಿಟ್ ನ್ನು ವಿತರಿಸಲಾಯಿತು.
ಕೇಂದ್ರ ಸರಕಾರದ ವಿಶೇಷ (ADIP) ಯೋಜನೆಯಡಿ ವಿಕಲಚೇತನರಿಗೆ ಉಚಿತ ಸಾಧನ ಸಲಕರಣೆ ವಿತರಿಸಲಾಯಿತು.
ಸನ್ಮಾನ
ಕಾರ್ಯಕ್ರಮದಲ್ಲಿ 33 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಘೋಷಿಸಿದ ರಾಷ್ಟ್ರ ಪ್ರಶಸ್ತಿ ವಿಜೇತೆ ಕಾರ್ಯಕರ್ತೆ ಪದ್ಮಾವತಿ ಅಮೀನ್ ಅವರನ್ನು & ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಅವ್ನಿ ಪಿ. ಜೈನ್ ಅವರನ್ನು ಸನ್ಮಾನಿಸಲಾಯಿತು.


ಇದೇ ಸಂದರ್ಭ ಮುಡಾರು ಗ್ರಾಮ ಪಂಚಾಯತ್ನ ಜನಪರ ಕಾರ್ಯಗಳ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೃತಿ ಡಿ. ಅತಿಕಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಶಾಸಕ ವಿ. ಸುನಿಲ್ ಕುಮಾರ್ ವಿವಿಧ ಸವಲತ್ತು ವಿತರಣೆ ಮಾಡಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್., ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶಶಿಧರ ಕೆ. ಜಿ., ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ವಿಜಯ, ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಪೂಜಾರಿ, ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಪೂಜಾರಿ, ಈದು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ, ಮಿಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸನ್ಮತಿ ನಾಯಕ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುಡಾರು ಗ್ರಾಮ ಪಂಚಾಯತ್ ಪಿ.ಡಿ.ಓ ರಮೇಶ್ ಎಸ್. ನಿರ್ವಹಿಸಿದರು.






























































