ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ. 75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಸೇವಾ ಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢರಾಗಿರುವ, ಈ ಹಿಂದೆ ಸರಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಜ. 21 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಅಥವಾ ಜಿಲ್ಲಾ ಪಂಚಾಯತ್ ವಿಭಾಗದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ






























































