ವೇಶ್ಯಾವಾಟಿಕೆ ದಂಧೆ ಆರೋಪ – ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ

ಮಂಗಳೂರು : ಮಂಗಳೂರಿನ ಬಿಜೈ ಕೆಎಸ್ ಆರ್ ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ಮೇಲೆ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ರಾಮ ಸೇನೆಕಾರ್ಯಕರ್ತರು ಜ.23ರಂದು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ.
ಮಸಾಜ್ ಸೆಂಟರ್​ನ ಗಾಜುಗಳನ್ನು ಪುಡಿಗೈದು, ಪೀಠೋಪಕರಣ ಮತ್ತು ಕಂಪ್ಯೂಟರ್ ಗಳನ್ನು ಧ್ವಂಸಗೊಳಿಸಿ ರಾಮ ಸೇನಾ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್​ಗಳ‌ನ್ನು ಮುಚ್ಚುವಂತೆ ಆಗ್ರಹಿಸಿದ್ದಾರೆ.

ಮಸಾಜ್​ ಸೆಂಟರ್​ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ. 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಕಾರ್ಯಕರ್ತನ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ ಎಂದು ಪ್ರಸಾದ್ ಅತ್ತಾವರ ಹೇಳಿದ್ದಾರೆ.
|ಸೆಂಟರ್ ಮಾಲೀಕ ಸುಧೀರ್ ಪ್ರತಿಕ್ರಿಯೆ ನೀಡಿದ್ದು, ವಾರಕ್ಕೊಮ್ಮೆ ಅಧಿಕಾರಿಗಳು ಮಸಾಜ್ ಸೆಂಟರ್ ಪರಿಶೀಲಿಸುತ್ತಿದ್ದಾರೆ. ಕಾನೂನು ಪ್ರಕಾರ ಅನುಮತಿ ಪಡೆದು ಕಳೆದ 2 ವರ್ಷದಿಂದ ನಾವು ಮಸಾಜ್ ಸೆಂಟರ್ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಅನೈತಿಕ ಚಟುವಟಿಕೆ ನಡೆಸುವ ಪಾರ್ಲರ್​​ಗಳಿದ್ದರೆ ದೂರು ಕೊಡಿ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾರ್ಪೊರೇಷನ್​ನವರು ಟ್ರೇಡ್ ಲೈಸೆನ್ಸ್ ಕೊಟ್ಟಿರುತ್ತಾರೆ. ಯಾವ ಕಂಡೀಷನ್ ಹಾಕಿ ಕೊಟ್ಟಿರುತ್ತಾರೆ ಅದನ್ನು ಪಾಲಿಸದಿದ್ದರೆ, ನಿಯಮಾವಳಿಗಳನ್ನು ಮೀರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ.































































































































error: Content is protected !!
Scroll to Top