ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಕಾರ್ಕಳ : ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ‍್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ. ಅವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು ಎಂದರು.





























































































































error: Content is protected !!
Scroll to Top