ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ – ಆಮಂತ್ರಣ ಪತ್ರಿಕೆ ಬಿಡುಗಡೆ

ಹೆಬ್ರಿ : ಹೆಬ್ರಿ ತಾಲೂಕಿನ ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 16 ರಂದು ಶಿವಪುರದಲ್ಲಿ ನಡೆಯಲಿದ್ದು, ಜ. 26ರಂದು ಶಿವಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಆಜೀವ ಸದಸ್ಯರಿಗೆ ಹಾಗೂ ಊರ ಪ್ರಮುಖರಿಗೆ ಆಮಂತ್ರಣ ಪತ್ರಿಕೆಯನ್ನು ಮುಟ್ಟಿಸುವ ಕಾರ್ಯ ಬೇಗ ಆಗಲಿ, ನಾವೆಲ್ಲರೂ ಸೇರಿ ವಿಜೃಂಭಣೆಯಿಂದ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್ ಸಂದರ್ಭೋಚಿತವಾಗಿ ಮಾತನಾಡಿ, ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಮುದ್ದೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಗಣೇಶ್ ಹಾಂಡ, ಸಂಚಾಲಕ ರಮಾನಂದ ಶೆಟ್ಟಿ, ಗೌರವ ಸಲಹೆಗಾರರಾದ ಮೋಹನ ದಾಸ್ ನಾಯಕ್, ಬೈಕಾಡಿ ಮಂಜುನಾಥ್ ರಾವ್ ಎಲಿಕೊಡು, ಲಕ್ಷ್ಮಿ ನಾರಾಯಣ ನಾಯ್ಕ್ ಕನ್ಯಾನ, ಸುರೇಶ್ ಶೆಟ್ಟಿ ಹುಣ್ಸೇಡಿ, ವಿಶ್ವನಾಥ ನಾಯಕ್, ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಘವೇಂದ್ರ ಪೂಜಾರಿ, ನಾಯರ್ಕೋಡು ಸಂತೋಷ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಶಿವಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಗುಲಾಬಿ, ಸ್ವಾಗತ ಸಮಿತಿಯ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರುಗಳು, ಶಿವಪುರ ಗ್ರಾಮ ಪಂಚಾಯಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ಪರಿಶ್ರಮ ಸಂಘಟನೆಯ ಸದಸ್ಯರು, ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ಡಾ. ಪ್ರವೀಣ್ ಕುಮಾರ್ ಎಸ್. ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.





























































































































error: Content is protected !!
Scroll to Top