ಕಲ್ಲಗುಪ್ಪೆ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ

ಕಾರ್ಕಳ : ಸ. ಹಿ. ಪ್ರಾ. ಶಾಲೆ ಕಲ್ಲಗುಪ್ಪೆಯಲ್ಲಿ 76ನೇ ಗಣರಾಜೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಇಸ್ರೋ ನಿವೃತ್ತ ವಿಜ್ಞಾನಿ ಜನಾರ್ಧನ್ ಇಡ್ಯಾ, ಹಳವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಗಣ್ಯರು ದಿನದ ಮಹತ್ವದ ಬಗ್ಗೆ ಭಾಷಣ ಹಾಗೂ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಶಾಲಾ ಮುಖ್ಯ ಶಿಕ್ಷಕ ಮನೋಹರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿಯರಾದ ವನಿತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸುನಂದಾ ವಂದಿಸಿದರು. ಶಿಕ್ಷಕಿಯರಾದ ಅಶ್ವಿನಿ, ಚೈತ್ರಾ, ಮಂಜುಳಾ ಸಹಕರಿಸಿದರು.





























































































































error: Content is protected !!
Scroll to Top