ಕಾರ್ಕಳ ಜ್ಞಾನಸುಧಾ : 76ನೇ ಗಣರಾಜ್ಯೋತ್ಸವ ಸಂಭ್ರಮ

ಕಾರ್ಕಳ : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಟ್ಟುಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಅಭಿಪ್ರಾಯಪಟ್ಟರು.

ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಪಿ.ಆರ್.ಒ. ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫ್ರಾದ ಮಾಲಕ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.





























































































































error: Content is protected !!
Scroll to Top