ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಾಲಾಶ್ರೀ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಿ.ಆರ್.ಪಿ ಜ್ಯೋತಿ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಪರಸ್ಪರ ಜೋಗಿನ, ಶಾಲಾ ಸಹ ಶಿಕ್ಷಕಿಯರಾದ ವಾಣಿ, ಅಶ್ವಿನಿ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ಸಹ ಶಿಕ್ಷಕ ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್. ವಂದಿಸಿದರು.
ಕಾರ್ಕಳ ಮೈನ್ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ






























































