ಅಮೃತ ಭಾರತಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರ ವಾದಿರಾಜ ಶೆಟ್ಟಿ ಚಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶ ಸ್ವಾತಂತ್ರ್ಯ ಸಿಕ್ಕಿದ ನಂತರ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿದಾನ ರಚನಾ ಸಮಿತಿ ರಚಿಸಿ, ಹಲವಾರು ತಿದ್ದುಪಡಿಯೊಂದಿಗೆ ಜನವರಿ 26, 1950ರಂದು ಜಾರಿಗೆ ಬಂದಿದೆ. ಈ ಸಂವಿದಾನದ ಅಡಿಯಲ್ಲಿ ನಮ್ಮ ದೇಶ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮುನ್ನಡೆಯುತ್ತಿದೆ ಎಂದರು.
ಟ್ರಸ್ಟ್ ಅಧ್ಯಕ್ಷ ಸಿಎ ಎಂ.ರವಿ ರಾವ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ , ಟ್ರಸ್ಟಿ ಬಾಲಕೃಷ್ಣ ಮಲ್ಯ, ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





























































































































error: Content is protected !!
Scroll to Top