ಕಾರ್ಕಳ : ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಯುಕ್ತ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸ ಆಚರಿಸಲಾಯಿತು. ಎಸ್‌ವಿ ಎಜುಕೇಷನ್ ಟ್ರಸ್ಟಿನ ಕೋಶಾಧಿಕಾರಿ ಐ. ರವೀಂದ್ರನಾಥ್ ಧ್ವಜಾರೋಹಣಗೈದು, ನಮ್ಮ ಸಂವಿಧಾನ ನಮಗೆ ಎಲ್ಲವನ್ನೂ ನೀಡಿದೆ. ಅದರ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಭಾರತದ ಸಂವಿಧಾನದ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ಈ ಸಂದರ್ಭ ಎಸ್.ವಿ. ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ. ಪಿ. ಶೆಣೈ, ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾ ನಾಯಕ್, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನೇಮಿರಾಜ ಶೆಟ್ಟಿ, ಮುಖ್ಯ ಶಿಕ್ಷಕರಾದ ಯೋಗೇಂದ್ರ ನಾಯಕ್, ಮಾಲಿನಿ ಕೆ., ಬಂಡಿ ವಡ್ಡರ್ ಹಾಗೂ ಎಸ್.ವಿ.ಟಿ. ವಿದ್ಯಾ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಾಪಕ ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಎಸ್.ವಿ.ಟಿ ವಿದ್ಯಾಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ






























































